ಮೈಸೂರು: ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡುವ ರೀತಿ ತಂತ್ರಜ್ಞಾನ ಬಳಸಿ ನಕಲಿ ಫೋಟೋ ರಚಿಸಿ ವೈರಲ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ನಗರದ ಲಕ್ಷ್ಮೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ತಮ್ಮ ದೂರಿನ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ ಮಾತನಾಡಿದ ಅವರು “ನಾನು ಎಂದಾದರೂ ಧರ್ಮದ ಬಗ್ಗೆ ಮಾತನಾಡಿದ್ದೀನಾ?. ಇವರುಗಳು ಧರ್ಮ-ಧರ್ಮದ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇದೇ ಅವರ ಕೆಲಸವಾಗಿಬಿಟ್ಟಿದೆ. ಪ್ರಶಾಂತ್ ಸಂಬರ್ಗಿ ಯಾರು ಅಂತಾನೇ ಗೊತ್ತಿಲ್ಲ. ಎಐ ತಂತ್ರಜ್ಞಾನ ಬಳಸಿ ನನ್ನ ನಕಲಿ ಫೋಟೋ ರಚಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ, ಪೊಲೀಸ್ ದೂರು ನೀಡಿ ಎಫ್.ಐ.ಆರ್ ದಾಖಲು ಮಾಡಿಸಿದ್ದೇನೆ ಎಂದಿದ್ದಾರೆ.