ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆ ಜನವರಿ 5ರಂದು ತಾಯಿ ಮನೆ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೊರಟು, ಅಲ್ಲಿಗೂ ಹೋಗದೇ, ಮನೆಗೂ ಮರಳದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿರುವ ಅವರು ಕನ್ನಡ, ತುಳು, ಮರಾಠ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ;0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.



