Thursday, October 23, 2025

spot_img

ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿ, ಹೊಟೇಲ್, ಬ್ಯಾಂಕ್, ಕಂಪೆನಿಗಳು ಹಾಗೂ ಅಂಗಡಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಊರಿನ ಹೆಸರನ್ನು ಸಹ ನಮೂದಿಸುವುದು ಕಡ್ಡಾಯವಾಗಿರುವ ಹಿನ್ನೆಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು 15 ದಿನಗಳ ಒಳಗಾಗಿ ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಊರಿನ ಹೆಸರಿನೊಂದಿಗೆ ಕನ್ನಡದಲ್ಲಿ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಮತ್ತು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕವನ್ನು ಶೇ.60 ರಷ್ಟು ಪ್ರದರ್ಶಿಸಲು ಕ್ರಮವಹಿಸಬೇಕು.

ಈವರೆಗೂ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳದ/ ನವೀಕರಿಸದೇ ಇರುವ ಉದ್ದಿಮೆದಾರರು 7 ದಿನಗಳ ಒಳಗೆ ಉದ್ದಿಮೆ ಪರವಾನಿಗೆ ಪಡೆಯಲು ನಿಯಮಾನುಸಾರ ಅರ್ಜಿ ಸಲ್ಲಿಸಬಹುದಾಗಿದೆ. ತಪ್ಪಿದ್ದಲ್ಲಿ ಕರ್ನಾಟಕ ಪುರಸಭಾ ಅಧಿನಿಯಮ 256 ರ ಉಪ ನಿಯಮ (6) ರಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles