ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆ ನಾಳೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಫ್ಲೋಮ, ಇಂಜಿನಿಯರಿಂಗ್, ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಣೆಯಾಗಿಲ್ಲ.


