ಉಡುಪಿ : ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ಜುಲೈ 24 ಗುರುವಾರದಂದು ಶಾಲೆಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
