ಉಡುಪಿ : ಬಡಗುಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ನಡುವೆಯೇ ಕಂಬಳ ಶಂಕುಸ್ಥಾಪನೆ ನೆರವೇರಿಸಿದ ಹಿನ್ನೆಲೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಜಿಲ್ಲೆಯ ಹಲವು ಶಾಸಕರು, ಸಂಸದರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಡುಪಿ ತಹಶೀಲ್ದಾರ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಿಷೇಧಾಜ್ಞೆ ಉಲ್ಲಂಘನೆ ಆರೋಪದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಾದವರಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕುಂದಾಪುರ ಕ್ಷೇತ್ರದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ, ಎಂಎಲ್‌ಸಿ ಧನಂಜಯ್ ಸರ್ಜಿ, ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಸೇರಿದಂತೆ ಹಲವರು ಸೇರಿದ್ದಾರೆ.

ಇದೇ ಪ್ರಕರಣದಲ್ಲಿ ಮತ್ತಿತರ ಮುಖಂಡರು ಹಾಗೂ ಕಾರ್ಯಕರ್ತರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ನಂದಳಿಕೆ ಶ್ರೀಕಾಂತ್ ಭಟ್, ಶುಭಕರ ಶೆಟ್ಟಿ, ಸಂದೀಪ್ ಶೆಟ್ಟಿ, ಜ್ಞಾನಾನಂದ ಹೆಗ್ಡೆ, ವೀಣಾ ಶೆಟ್ಟಿ, ಸಾಯಿಶ ಸುಧಾಕರ ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಶ್ರೀನಿಧಿ ಹೆಗ್ಡೆ, ಹರಿಕೃಷ್ಣ ಬಂಟ್ವಾಳ, ರವೀಂದ್ರ ಮಡಿವಾಳ್, ಅಂತೋನಿ ಡಿಸೋಜಾ, ವಿಜಯ್ ಕುಮಾರ್ ಕಂಗಿನಮನೆ, ಶ್ಯಾಮಲಾ ಕುಂದರ್, ಲೋಕೇಶ್ ಶೆಟ್ಟಿ, ಮೋಹನ್ ಭಟ್, ದಿಲ್ಲೇಶ್ ಶೆಟ್ಟಿ, ಶಾಂತಾರಾಮ ಶೆಟ್ಟಿ, ರವೀಂದ್ರ ನಾಯ್ಕ, ಗೋಪಾಲ ಕೃಷ್ಣ ಮಟ್ಟು, ಸುಭಾಷ್ ಬಲ್ಲಾಳ್, ಶಿವಪುನಾರ್ ಹಿರೇಬೆಟ್ಟು, ಮೋಹನ್ ಶೆಟ್ಟಿ, ಕೃಷ್ಣ ಕುಲಾಲ್ ಸೇರಿದಂತೆ ಇತರರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದ ಸಂದರ್ಭದಲ್ಲೇ ಶಂಕುಸ್ಥಾಪನೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



