ಕೋಟ : ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬೇಳೂರು ಗ್ರಾಮದಲ್ಲಿ ನಡೆದಿದೆ. ಅಚ್ಲಾಡಿ ಅಂಬೇಡ್ಕರ್ ಕಾಲನಿ ನಿವಾಸಿ ಶರತ್ (32) ಮೃತಪಟ್ಟ ಕಾರ್ಮಿಕ.

ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ ಮನೆಗೆ ತೆಂಗಿನಕಾಯಿ ಗುತ್ತಿಗೆದಾರರ ಜತೆ ಅಚ್ಲಾಡಿಯ ತೋಟವೊಂದಕ್ಕೆ ಕೆಲಸಕ್ಕೆ ತೆರಳಿದ್ದು ಮರದಿಂದ ಕಾಯಿ ಕೊಯ್ದು ಟೆಂಪೋಗೆ ಲೋಡ್ ಮಾಡುವ ಸಂದರ್ಭದಲ್ಲಿ ಕಾರ್ಮಿಕ ಶರತ್ ನಾಪತ್ತೆಯಾಗಿದ್ದ. ಬಹಳಷ್ಟು ಕಡೆ ಹುಡುಕಾಡಿದರೂ ಕೂಡ ಶರತ್ ಪತ್ತೆಯಾಗಿರಲಿಲ್ಲ. ಮರುದಿನ ಕೈಲೇರಿ ಸಮೀಪ ತೋಡಿನಲ್ಲಿ ಶರತ್ ಶವ ಪತ್ತೆಯಾಗಿದೆ. ಬುಧವಾರದಂದು ಭಾರಿ ಮಳೆ ಹಿನ್ನಲೆ ನೀರಿನ ತೋಡು ತುಂಬಿ ಹರಿಯುತ್ತಿತ್ತು, ಇದೇ ಸಂದರ್ಭ ಕಾಯಿ ಕೊಯ್ದು ಟೆಂಪೋಗೆ ಸಾಗಿಸುತ್ತಿದ್ದ ಶರತ್ ಕಾಲು ಜಾರಿ ತೋಡಿಗೆ ಬಿದ್ದಿದ್ದು ಯಾರೂ ಗಮನಿಸದೆ ಮುಳುಗಿ ಮೃತಪಟ್ಟಿದ್ದಾನೆ. ಮೃತ ಶರತ್ ಸಹೋದರಿ ಹಾಗೂ ತಾಯಿಯನ್ನು ಅಗಲಿದ್ದಾನೆ

ಬುಧವಾರ ರಾತ್ರಿ ತನಕ ಹಾಗೂ ಗುರುವಾರ ಶವ ದೊರೆಯುವ ತನಕ ಪಕ್ಕದ ಹೊಳೆಯಲ್ಲಿ ಶರತ್ ಗಾಗಿ ವ್ಯಾಪಕ ಶೋಧ ನಡೆಸಲಾಗಿತ್ತು. ಘಟನಾ ಸ್ಥಳಕ್ಕೆ ಕೋಟ ಠಾಣೆ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


