Monday, March 2, 2026

spot_img

ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಆಯತಪ್ಪಿದ ಬಾವಿಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ಸಾವು.!

ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿ ಪ್ರದೇಶದಲ್ಲಿ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಆಯತಪ್ಪಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತ ಮಗುವನ್ನು ಕೀರ್ತನಾ (1.5) ಎಂದು ಗುರುತಿಸಲಾಗಿದೆ.

 ಮಗುವಿನ ತಾಯಿ ನಯನಾ ಕರ್ಕಡ ಅವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಅಚಾನಕ್‌ ಮಗು ಕೈಯಿಂದ ಜಾರಿ ಬಾವಿಗೆ ಬಿದ್ದಿದೆ. ಈ ಘಟನೆ ಗಮನಿಸಿದ ತಾಯಿ ತಕ್ಷಣವೇ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿತ್ತು.

ಘಟನೆಯ ಮಾಹಿತಿ ಪಡೆದ ಉಡುಪಿ ನಗರ ಠಾಣೆಯ ಪಿಎಸ್‌ಐ ಭರತೇಶ್ ಕಂಕಣವಾಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles