ಉಡುಪಿ : ಪಡುಕರೇ ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾನ್ವೇಷಣೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ತೆಕ್ಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಾರದಾ ಹೊಳ್ಳ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಮೇಶ್ ಎಚ್. ಕುಂದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಪೋಷಕರ ಪ್ರತಿನಿಧಿ ಶ್ರೀನಿವಾಸ್ ಶೆಟ್ಟಿಗಾರ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಮೇಶ್ ಆಚಾರ್, ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ಸಂಚಾಲಕ ಸಂತೋಷ್ ನಾಯ್ಕ್ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳಾದ ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಶಮಿತಾ ಮತ್ತು ತ್ರಿಷಾ ಉಪಸ್ಥಿತರಿದ್ದರು. ಕಾಲೇಜಿನ ಸಾಂಸ್ಕೃತಿಕ ಸಂಘದ ಸಂಚಾಲಕ ಡಾ. ಶಂಕರ ನಾಯ್ಕ್ ಬಿ. ಸ್ವಾಗತಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಸಂಜನಾ ಉದ್ಘಾಟಕರನ್ನು ಪರಿಚಯಿಸಿದರು. ತೃತೀಯ ಬಿಕಾಂ ವಿದ್ಯಾರ್ಥಿನಿ ಸ್ನೇಹ ವಂದಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮಿಶ್ರಿಯಾ ಕಾರ್ಯಕ್ರಮ ನಿರೂಪಿಸಿದರು.

ನಂತರ ನಡೆದ ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿವಿಧ ಪ್ರತಿಭೆಗಳನ್ನು ಪ್ರದರ್ಶಿಸಿದರು. ಕಾಪು ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಸತೀಶ್ ಕೆ., ಮಣೂರು ಪಡುಕರೆಯ ಸರ್ಕಾರಿ ಪ್ರಾಥಮಿಕ ಶಾಲೆಯ ನಾಗರತ್ನ ಗುಂಡ್ಮಿ ಹಾಗೂ ಸಾಸ್ತಾವು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವನಿತಾ ಶೆಟ್ಟಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಭಟ್ ಕಾರ್ಯಕ್ರಮದ ನಿರ್ವಹಣೆಯಲ್ಲಿ ಸಹಕರಿಸಿದರು.


