ಉಡುಪಿ : ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆಶೀಶ್ ಹಾಗೂ ಕಾರ್ತಿಕ್ ಎಂಬವರನ್ನು ಆರೋಪಿಗಳಾಗಿ ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ಮುಂದುವರಿದಿದೆ.

ಕಳ್ಳತನದಲ್ಲಿ ಇನ್ನಿತರರು ಭಾಗಿಯಾಗಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಕಳೆದ ವಾರ ಥೀಮ್ ಪಾರ್ಕ್‌ನಲ್ಲಿ ತಾಮ್ರದ ಸಾಮಗ್ರಿಗಳು ಕಳ್ಳತನವಾಗಿದ್ದ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಆರಂಭವಾದ ಬಳಿಕ ಒಂದಲ್ಲೊಂದು ಸಮಸ್ಯೆಯಿಂದಾಗಿ ನಿರಂತರವಾಗಿ ವಿವಾದ ಹಾಗೂ ಸುದ್ದಿಯಾಗುತ್ತಲೇ ಇರುವುದರಿಂದ, ಯೋಜನೆಯ ಸುರಕ್ಷತೆ ಹಾಗೂ ನಿರ್ವಹಣೆ ಕುರಿತು ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಮೂಡಿವೆ.



