ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್ ವಹಿಸಿದ್ದರು.

ಸಭೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಹವಾಲುಗಳನ್ನು ಆಲಿಸಲಾಯಿತು. ಈ ಸಭೆಯಲ್ಲಿ ಪ್ರಮುಖ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಭಾಗವಹಿಸಿದ್ದು, ಸುಮಾರು 98 ಜನ ಪಾಲ್ಗೊಂಡಿರುತ್ತಾರೆ.
