Friday, June 5, 2026

spot_img

ಪಾಪನಾಶಿನಿ ಹೊಳೆಯಲ್ಲಿ ಜಾನುವಾರು ಅವಶೇಷ ಪತ್ತೆ ಪ್ರಕರಣ: ಆರೋಪಿ ಬಂಧನ

ಉಡುಪಿ : ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರ್ವ ಗ್ರಾಮದ ಪದವು ನಿವಾಸಿ ಅಶೋಕ (52) ಬಂಧಿತ ಆರೋಪಿ.

 ಜೂನ್ 1ರಂದು ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಬಿದ್ದಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ ಮರಬದ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನೆಡೆಸಿದ್ದರು. ಕಾಪು ಪಶುವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಪರಿಶೀಲನಾ ಅಧಿಕಾರಿಗಳ ಸಮ್ಮುಖದಲ್ಲಿ ಮಹಜರು ನಡೆಸಿ, ಜಾನುವಾರಿನ ಮೇಲ್ದವಡೆ ಭಾಗ, ಎರಡು ಗೆರಸುಗಳು, ಮಾಂಸ ಮತ್ತು ಹೊಟ್ಟೆಯ ಒಳಭಾಗಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ತನಿಖೆಯ ವೇಳೆ ಜಾನುವಾರನ್ನು ಕಡಿದು ಮಾಂಸ ಮಾಡಿ, ಅದರ ಅವಶೇಷಗಳನ್ನು ಹೊಳೆಗೆ ಎಸೆದಿರುವುದು ಬೆಳಕಿಗೆ ಬಂದಿದ್ದು, ಆರೋಪಿಯಿಂದ ಜಾನುವಾರಿನ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ ಅಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles