ಕೋಟ : ಮಧುಮೇಹ ಮತ್ತು ರಕ್ತದೊತ್ತಡದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಬಹು ಅಂಗಾಂಗ ವೈಫಲ್ಯಕ್ಕೆ ದಾರಿಯಾಗುತ್ತದೆ, ಪ್ರತಿ ಎರಡು ತಿಂಗಳಿಗೊಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಪ್ರಾಥಮಿಕ ಹಂತದಲ್ಲೆ ರೋಗದ ಲಕ್ಷಣಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ನೆರವಾಗಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹೇಳಿದರು.

ಅವರು ಇಂದು ಪಾರಂಪಳ್ಳಿ ಪಡುಕೆರೆಯಲ್ಲಿ ‘ನಮ್ಮ ಕ್ಲಿನಿಕ್’ ಉದ್ಘಾಟಿನೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನl ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ
ಸಾಲಿಗ್ರಾಮ ಪಟ್ಟಣ ಪಂಚಾಯತಿನ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರ್ತಿ, ಡಾ. ಬಸವರಾಜ್ ಜಿ ಹುಬ್ಬಳ್ಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ, ಹಾಗೂ ಸಾಲಿಗ್ರಾಮದ ಪಟ್ಟಣ ಪಂಚಾಯತಿನ ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.