Wednesday, March 4, 2026

spot_img

ಪೊಲೀಸ್ ಇಲಾಖೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಬೋಲೇರೋ ವಾಹನ ಕೊಡುಗೆ

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಉಡುಪಿ ಜಿಲ್ಲಾ ಪೊಲೀಸರಿಗೆ ಸೇವಾ ಚಟುವಟಿಕೆಗಳಲ್ಲಿ ಬಳಸಲು ಒಂದು ಬೋಲೇರೋ ವಾಹನವನ್ನು ಕೊಡುಗೆಯಾಗಿ ನೀಡಿದೆ.

ಉಡುಪಿ ಎಸ್‌ಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿಸಿ, ಎಸ್‌ಪಿ ಹರಿರಾಮ್ ಶಂಕರ್ ಅವರಿಗೆ ವಾಹನದ ಕೀಲಿಯನ್ನು ಹಸ್ತಾಂತರಿಸಿದರು.

 ಕಾರ್ಯಕ್ರಮದಲ್ಲಿ ವಾಹನವನ್ನು ಹಸ್ತಾಂತರಿಸಿದ ಬ್ಯಾಂಕ್ ಅಧ್ಯಕ್ಷರನ್ನು ಪೊಲೀಸ್ ಇಲಾಖೆ ಸನ್ಮಾನಿಸಿ ಧನ್ಯವಾದ ಸಲ್ಲಿಸಿತು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ರಾಜೇಂದ್ರಕುಮಾರ್, ರಾಜ್ಯದಲ್ಲಿನ ಸರ್ಕಾರಿ ಇಲಾಖೆಯಲ್ಲಿ ಪೊಲೀಸ್ ಇಲಾಖೆ ಹೆಚ್ಚು ಸವಾಲುಗಳನ್ನು ಎದುರಿಸುತ್ತಾ ಕೆಲಸ ಮಾಡುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಮಹತ್ವದ ಜವಾಬ್ದಾರಿ. ದಕ್ಷಿಣ ಕನ್ನಡ ಪೊಲೀಸ್ ಇಲಾಖೆಗೆ ನಮ್ಮ ಬೆಂಗಳೂರು ಒದಗಿಸಿದ್ದೇವೆ. ಉಡುಪಿ ಜಿಲ್ಲೆಯಿಂದಲೂ ಮನವಿ ಬಂದಾಗ ಸಂತಸದಿಂದಲೇ ಸ್ಪಂದಿಸಿದ್ದೇವೆ ಎಂದರು.

 ಪೋಲೀಸ್ ಇಲಾಖೆಯ ಹಲವಾರು ವಾಹನಗಳು 15 ವರ್ಷಗಳ ಸೇವಾ ಅವಧಿ ಪೂರೈಸಿದ್ದು, ಕೆಲವು ದುರಸ್ತಿಯಲ್ಲಿ ಇರುವುದರಿಂದ ಕರ್ತವ್ಯ ನಿರ್ವಹಣೆಗೆ ಅಡಚಣೆ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯ ಮನವಿಗೆ ಸ್ಪಂದಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ ಸಿಎಸ್ಆರ್ ನಿಧಿಯಿಂದ ವಾಹನ ಒದಗಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles