Wednesday, March 4, 2026

spot_img

ಪೊಲೀಸ್‌ ರ ಮೇಲೆ ಕಾರು ಹತ್ತಿಸಿ, ಅಕ್ರಮ ಗೋ ಸಾಗಟ ಯತ್ನ, ಇಬ್ಬರು ವಶಕ್ಕೆ

ಉಡುಪಿ : ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿ ಅಕ್ರಮ ಗೋ ಸಾಗಟಕ್ಕೆ ಯತ್ನಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತರು.

ಇದೇ ಆಗಸ್ಟ್‌ ೮ರಂದು ಶುಕ್ರವಾರ ಉಡುಪಿ ಹೆಜಮಾಡಿ ಟೋಲ್‌ ಗೇಟ್‌ ಬಳಿ ದನ ಕಳವು ಪ್ರಕರಣ ಹಿನ್ನಲೆ ಗಂಗೊಳ್ಳಿ ಪೊಲೀಸ್‌ರು ಖಚಿತ ಮಾಹಿತಿ ಮೇರೆಗೆ ದನಗಳ್ಳರಿಗಾಗಿ ಕಾಯುತ್ತಿದ್ದ ಸಂದರ್ಭ ಅನುಮಾನಸ್ಪದವಾದ ಫಾರ್ಚುನರ್ ಕಾರು ಟೋಲ್‌ ಬಳಿ ಬಂದಿತ್ತು. ಹೀಗೆ ಪರಿಶೀಲನೆ ನಡೆಸುತ್ತಿರುವಾಗ ಕಾರಿನ ಒಳಗೆ ಹಿಂಸಾತ್ಮಕವಾದ ರೀತಿಯಲ್ಲಿ ಐದಾರು ದನಗಳನ್ನು ಕಟ್ಟಿ ಹಾಕಿರುವುದು ಕಂಡು ಬಂದಿದೆ. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ ,ಆರೋಪಿಗಳು  ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ?  ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದರು.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ  ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಿಂದ ಪರಾರಿಯಾದ ಆರೋಪಿಗಳಾದ ಸಫ್ವಾನ್ ಕಾಪು, ಅಜೀಂ ಕಾಪು ಮತ್ತು ರಾಜಿಕ್ ಬಜಪೆ ಎಂಬವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ವಶಕ್ಕೆ ಪಡೆದು  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಮೊಹಮ್ಮದ್ ರಾಜಿಕ್ ಬಜ್ಪೆ ಎಂಬಾತನ ಮೇಲೆ ಬಜಪೆ ಪೊಲೀಸ್ ಠಾಣೆಯಲ್ಲಿ ಅಕ್ರಮ ಗೋ ಸಾಗಾಟದ ಬಗ್ಗೆ ಪ್ರಕರಣ ದಾಖಲಾಗಿ ನ್ಯಾಯಾಲಯದ ವಿಚಾರಣೆ ನಡೆಯುತ್ತಿದೆ. ಇನ್ನೋರ್ವ ಆರೋಪಿ ಮೊಹಮ್ಮದ್ ಅಜಿಮ್ ಕಾಪು ಎಂಬಾತನ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಅಕ್ರಮ ಗೋಸಾಗಾಟದ ಬಗ್ಗೆ ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ, ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಸೆಂಟ್ರಿಂಗ್ ಸಾಮಗ್ರಿಗಳ ಕಳ್ಳತನ ಬಗ್ಗೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ನಡೆಯುತ್ತಿದೆ. ಅಲ್ಲದೇ ಈತ ಉತ್ತರ ಕನ್ನಡ ಜಿಲ್ಲೆಯ ಚಿತ್ತಾಕುಲ ಮತ್ತು ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನ ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles