Monday, March 2, 2026

spot_img

ಪ್ರಧಾನಮಂತ್ರಿ ಸೂರ್ಯ ಘರ್- ಜಿಲ್ಲೆಗೆ 6.2 ಕೋಟಿ ಬಿಡುಗಡೆ: ಸಂಸದ ಕೋಟ ಹೇಳಿಕೆ.

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ 6 ಕೋಟಿ 2 ಲಕ್ಷ ರೂ.ಗಳು 773 ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್‌ನ ವಿವಿಧ ಗ್ರಾಮ ಪಂಚಾಯತ್‌ಗಳ ಮೂಲಕ ಸೂರ್ಯ ಘರ್ ಯೋಜನೆಯ ಅನುಷ್ಠಾನ ಪರಿಶೀಲಿಸಿದ ಸಂಸದ ಕೋಟ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳು ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ಈ ಯೋಜನೆಯ ಪ್ರಯೋಜನಗಳನ್ನು ಮನೆ ಮನೆಗೆ ತಲುಪಿಸಬೇಕೆಂದು ಮನವಿ ಮಾಡಿದರು.

ಈಗಾಗಲೇ ಜಿಲ್ಲೆಯಲ್ಲಿ ಸೂರ್ಯ ಘರ್ ಯೋಜನೆಗೆ 5,270 ಅರ್ಜಿಗಳು ಬಂದಿದ್ದು, 1,155 ಮನೆಗಳಿಗೆ ವೆಂಡರ್ ಆಯ್ಕೆಯನ್ನು ಮಾಡಲಾಗಿದೆ. ಇವುಗಳಲ್ಲಿ 803 ಮನೆಗಳಿಗೆ ಸೋಲಾರ್ ಅಳವಡಿಕೆ ಮಾಡಲಾಗಿದ್ದು, ಅಳವಡಿಕೆ ಮಾಡಲಾದ 773 ಫಲಾನುಭವಿಗಳಿಗೆ ಒಟ್ಟು 6 ಕೋಟಿ 2 ಲಕ್ಷ ಹಣ ಬಿಡುಗಡೆ ಮಾಡಲಾಗಿದ್ದು, ಪ್ರತಿ ಫಲಾನುಭವಿಗೆ 78,000 ಸಬ್ಸಿಡಿ ಮೊತ್ತದ ಪ್ರಯೋಜನ ಸಿಗಲಿದೆ ಎಂದು ಸಂಸದರು ತಿಳಿಸಿದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಹಾಗೂ ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ದಿನೇಶ್ ಉಪಾಧ್ಯಾಯ ಮತ್ತು ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಯೋಜನೆಯ ಅನುಷ್ಠಾನ ಸಮೀತಿಯ ಸದಸ್ಯರಾದ ನಿತಿನ್ ಸಾಲಿಯಾನ್ ಹಾಗೂ ಕೋಟತಟ್ಟು, ಉಪ್ಪೂರು, ನಿಟ್ಟೆ, ಕಿರಿಮಂಜೇಶ್ವರ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles