Wednesday, June 10, 2026

spot_img

ಪ್ರಧಾನಿ ಮೋದಿ ಆಡಳಿತದ 12 ವರ್ಷ ಪೂರ್ಣ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ

ಉಡುಪಿ : ಭಾರತದ ಪ್ರಧಾನಿಯಾಗಿ ಸತತ 12 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿ, 4,339ನೇ ದಿನವನ್ನು ದಾಖಲಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪದ ಯಶಸ್ಸಿಗಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪೂಜೆ ನೆರವೇರಿತು. ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಈ ವಿಶೇಷ ಪ್ರಾರ್ಥನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಠದ ದಿವಾನ ಉದಯಕುಮಾರ್ ಸರಳತ್ತಾಯ, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ಬಿಜೆಪಿ ಜಿಲ್ಲಾ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್ ಹಾಗೂ ದಿನಕರ ಶೆಟ್ಟಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸಂಧ್ಯಾ ರಮೇಶ್, ನಯನಾ ಗಣೇಶ್, ವೀಣಾ ಶೆಟ್ಟಿ, ಪ್ರಜ್ಞಾ ಶೆಟ್ಟಿ, ಪದ್ಮಾ ರತ್ನಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ ಮತ್ತಷ್ಟು ವೇಗ ಪಡೆದು, 2047ರ ವಿಕಸಿತ ಭಾರತದ ಗುರಿ ಸಾಕಾರಗೊಳ್ಳಲಿ ಎಂದು ಈ ವೇಳೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles