Wednesday, March 4, 2026

spot_img

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ನೋಂದಾವಣಿ ಫಲಕ ಬಿಡುಗಡೆ

ಕೋಟ : ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ನಗರ ಅಭಿವೃದ್ಧಿ ಕೊಳ ಉಡುಪಿ, ಮತ್ತು ಉಡುಪಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ )2.0 ಯೋಜನೆಯ ಫಲಕ ಅನಾವರಣ ಹಾಗೂ ಅನುಷ್ಠಾನದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿ, ಕೇಂದ್ರ ಸರ್ಕಾರ ಆರಂಭಿಸಿದ ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) 2.0, ಎಲ್ಲರಿಗೂ ಹೌಸಿಂಗ್ ದೃಷ್ಟಿಕೋನವನ್ನು ಸಾಧಿಸಲು ನವೀಕರಿಸಿದ ಬದ್ಧತೆಯನ್ನು ಗುರುತಿಸುತ್ತದೆ. ಹೊಸ ಯೋಜನೆಗಳ ಪರಿಚಯದ ಮೂಲಕ ನಗರ ಮತ್ತು ಗ್ರಾಮೀಣ ಹೌಸಿಂಗ್ ಅಗತ್ಯಗಳನ್ನು ಪರಿಹರಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿಗಳನ್ನು ಸವಿಸ್ತಾರವಾಗಿ ತಿಳಿಸಿ ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ )2.0 ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ದೀಪ ಬೆಳಗಿಸಿ ಫಲಕ ಅನಾವರಣಗೊಳಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯಿತಿನ ಉಪಾಧ್ಯಕ್ಷೆ ಶ್ರೀಮತಿ ಗಿರಿಜಾ ಪೂಜಾರ್ತಿ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಅನುಸೂಯ ಆನಂದರಾಮ ಹೇರ್ಳೆ, ಜಿಲ್ಲಾ ನಗರ ಅಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮೋಹನ್ ರಾಜ್, ಉಡುಪಿ ನಗರಸಭೆಯ ಪೌರಾಯುಕ್ತರಾದ ಮಹಾಂತೇಶ್ ಹಂಗರಗಿ, ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಮುಖ್ಯ ಅಧಿಕಾರಿ ಅಜಯ್ ಬಂಡಾರ್ಕರ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಿಬ್ಬಂದಿ ಸುಮಿತ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಚಂದ್ರಶೇಖರ್ ಸೋಮಯಾಜಿಯವರು ವಂದನಾರ್ಪಣೆ ಸಲ್ಲಿಸಿದರು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಗರ ಅಭಿವೃದ್ಧಿ ಕೋಶದ ಮ್ಯಾನೇಜರ್ ಹಾಗೂ ವಸತಿ ವಿಭಾಗದ ಸಿಬ್ಬಂದಿಗಳು, ಹಾಗೂ ಉಡುಪಿ ಕಾರ್ಕಳ ಕಾಪು ಕುಂದಾಪುರ ಬೈಂದೂರು ಮುಖ್ಯ ಅಧಿಕಾರಿಗಳು, ಮತ್ತು ವಿಷಯ ನಿರ್ವಾಹಕರು ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಸದಸ್ಯರು, ಎಲ್ಲ ಸಿಬ್ಬಂದಿಗಳು ಹಾಗೂ ವಸತಿ ಫಲಾನುಭವಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles