ಉಡುಪಿ: ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ WWW.SCHOOLEDUCATION.KARNATAKA.GOV.IN ನಲ್ಲಿ ಪ್ರಕಟಿಸಲಾಗಿದ್ದು, ಸಂಬಂಧಿಸಿದ ಶಿಕ್ಷಕರುಗಳು ಪರಿಶೀಲಿಸಿ, ಯಾವುದೇ ಆಕ್ಷೇಪಣೆ ಇದ್ದಲ್ಲಿ ಆಕ್ಷೇಪಣಾ ನಮೂನೆ ಯಲ್ಲಿ ಮಾಹಿತಿಯನ್ನು ಪ್ರಿಂಟ್ ಮಾಡಿಸಿ, ಪೂರಕ ದಾಖಲೆಗಳೊಂದಿಗೆ ತ್ರಿಪ್ರತಿಯಲ್ಲಿ ಮೇ 8 ರ ಒಳಗಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಆಡಳಿತ) ಕಚೇರಿ ಪ್ರಕಟಣೆ ತಿಳಿಸಿದೆ.