ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕರಗ ಕೋಲಾಟ ಹಾಗೂ ಜಾನಪದ ನೃತ್ಯಗಳ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ “ಬುಡಕಟ್ಟು ಜನಾಂಗದ ಸಾಂಪ್ರದಾಯಕ ನೃತ್ಯದ” 6 ತಿಂಗಳ ಕಲಿಕಾ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ನಗರದ ಬನ್ನಂಜೆಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮೀ ಮಾತನಾಡಿ, ಸರಕಾರವು ವಿದ್ಯಾರ್ಥಿಗಳ ಕೌಶಲ್ಯಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ವಿದ್ಯಾರ್ಥಿಗಳು ಸಂಪೂರ್ಣ ಆಸಕ್ತಿಯೊಂದಿಗೆ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ, ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಗುರುಗಳಾದ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಮೇಶ್ ಕಲ್ಮಾಡಿ, ಗಣೇಶ್ ಬಾರ್ಕೂರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಚಾರಕಿಯರಾದ ಸುಚಿತ್ರಾ ಎಸ್ ನಿರೂಪಿಸಿ, ಲಲಿತಾ ವಂದಿಸಿದರು.