Friday, March 6, 2026

spot_img

ಫೆಬ್ರವರಿ 13 ರಂದು ಹೆಚ್.ಪಿ.ವಿ ಲಸಿಕಾ ಅಭಿಯಾನಕ್ಕೆ ಚಾಲನೆ : ಜಿಲ್ಲಾಧಿಕಾರಿ ಸ್ವರೂಪ ಟಿ ಕೆ

ಉಡುಪಿ : ಸರ್ಕಾರ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಬಾಲಕಿಯರಿಗೆ ರಾಷ್ಟ್ರೀಯ ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಆರಂಭಿಸಿದ್ದು, ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುವುದು. ಈ ಲಸಿಕೆಯು ಗರ್ಭಕಂಠದ ಕ್ಯಾನ್ಸರ್‌ನಿಂದ ರಕ್ಷಣೆ ನೀಡಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಹೆಚ್.ಪಿ.ವಿ ಚುಚ್ಚುಮದ್ದು ಲಸಿಕಾ ಕಾರ್ಯಕ್ರಮದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 14 ವರ್ಷ ಪೂರ್ಣಗೊಂಡ ಆದರೆ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ರೋಗವಾಗಿದ್ದು, ಹೆಚ್.ಪಿ.ವಿ ಚುಚ್ಚುಮದ್ದು ಪಡೆದುಕೊಳ್ಳುವುದರಿಂದ ಮಹಿಳೆಯರಲ್ಲಿ ಕ್ಯಾನ್ಸರ್ ಅನ್ನು ತಡೆಗಟ್ಟಬಹುದು ಎಂದರು.

ಜಿಲ್ಲೆಯಲ್ಲಿ 11,274 ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಲಸಿಕೆಯ 0.5mಟ ನ ಒಂದು ಡೋಸ್ ಅನ್ನು ನೀಡಲಾಗುವುದು. ಇದು ಸ್ವಯಂ ಪ್ರೇರಿತವಾಗಿದ್ದು, ಪೋಷಕರು ಅಥವಾ ಪಾಲಕರ ಒಪ್ಪಿಗೆ ಕಡ್ಡಾಯವಾಗಿದೆ. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಹಾಗೂ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಮೂರು ತಿಂಗಳ ಕಾಲ ಲಸಿಕೆ ನೀಡಲಾಗುವುದು ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಫೆಬ್ರವರಿ 13 ರಂದು ಬೆಳಗ್ಗೆ ಉಡುಪಿ ಬೋರ್ಡ್ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡುವ ಮೂಲಕ ಅಭಿಯಾನವನ್ನು ಉದ್ಘಾಟನೆ ನಡೆಯಲಿದೆ ಎಂದ ಅವರು, ಈ ಲಸಿಕೆಯು ಶೇ. 93 ರಷ್ಟು ಪರಿಣಾಮಕಾರಿಯಾಗಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್, ಕಾದ್ರೋಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಸವರಾಜ್ ಜಿ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ.ಅಶೋಕ್, ಆರ್.ಸಿ.ಎಚ್ ಅಧಿಕಾರಿ ಜ್ಯೋತ್ಸ್ಯಾ ಬಿ.ಕೆ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles