ಕುಂದಾಪುರ: ನಾಳೆ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಬಿಎಸ್ಏನ್ಎಲ್ ಅಧಿಕಾರಿಗಳೊಂದಿಗೆ. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಎಸ್ಎನ್ಎಲ್ ಸಂಪರ್ಕದ ಕುಂದು ಕೊರತೆ ವಿಚಾರಗಳ ಬಗ್ಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಹಾಗೂ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಬಿಎಸ್ಎನ್ಎಲ್ ಸಂಬಂಧಿತ ದೂರುಗಳು ಮತ್ತು ಬಿಎಸ್ಎನ್ಎಲ್ ಗುಣಮಟ್ಟವನ್ನು ಉತ್ತಮಗೊಳಿಸುವಿಕೆ ಬಗ್ಗೆ ಸಲಹೆ ಸೂಚನೆಗಳಿದ್ದರೆ ಮುಂಚಿತವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರ ಶಾಸಕರ ಕಚೇರಿಯ ಇ-ಮೇಲ್ ಗೆ ಅಥವಾ ಶಾಸಕರ ಕಚೇರಿಯ ದೂರವಾಣಿ ಸಂಖ್ಯೆಗೆ ಕಳುಹಿಸುವಂತೆ ಶಾಸಕರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
