ಹಿರಿಯಡ್ಕ: ಕೋಡಿಬೆಟ್ಟು ಗ್ರಾಮ ಪಂಚಾಯತ್ ಎದುರು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ್ ಮಡಿವಾಳ ಉಪಾಧ್ಯಕ್ಷೆ ಇಂದಿರಾ ಕೆ ಪೂಜಾರಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೈರಂಪಳ್ಳಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬೈರಂಪಳ್ಳಿ ಗ್ರಾಮ ಪಂಚಾಯತ್ ಎದುರು ರಾಜ್ಯ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಮಲ್ಯ, ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಬೊಮ್ಮಾರಬೆಟ್ಟು ಗ್ರಾಮ ಪಂಚಾಯಿತಿ ಎದುರು ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯ ಶ್ಯಾಮಲ ಕುಂದರ್, ಗ್ರಾಮ ಸಮಿತಿ ಅಧ್ಯಕ್ಷ ಉದಯ ಶೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ ಉಪಾಧ್ಯಕ್ಷ ಹರೀಶ್ ಸಾಲಿಯಾನ್ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
