Monday, March 2, 2026

spot_img

ಬೃಹತ್ ಗೀತೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ:  ಶ್ರೀ ಪುತ್ತಿಗೆ ಶ್ರೀಪಾದರ ವಿಶ್ವ ಗೀತಾ ಪರ್ಯಾಯ ಎಂದೇ ಖ್ಯಾತವಾದ ಚತುರ್ಥ ಪರ್ಯಾಯದ  ಬೃಹತ್ ಗೀತೋತ್ಸವ ಕಾರ್ಯಕ್ರಮ ನವೆಂಬರ್ 8ರಿಂದ  ಒಂದು ತಿಂಗಳ ಕಾಲ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಅಪೂರ್ವವಾದ ಲಕ್ಷಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಅಲ್ಲದೆ ಅನೇಕ ಸಂತರು ಈ ಉತ್ಸವದಲ್ಲಿ ಪಾಲ್ಗ್ಗೊಂಡು ಗೀತಾ ಸಂದೇಶ ನೀಡಲಿದ್ದಾರೆ. 

 ವೈವಿಧ್ಯಮಯವಾಗಿ ಸರ್ವ ಜನರ ಸಮಾಗಮದೊಂದಿಗೆ ನಡೆಯಲಿರುವ ಈ ಉತ್ಸವದ ರೂಪುರೇಷೆ ಕುರಿತಂತೆ ಅನೇಕ ಸಂಘ ಸಂಸ್ಠೆಗಳ ಪ್ರಮುಖರ ಸಭೆಗಳು ಈಗಾಗಲೇ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿದ್ದು ಬುಧವಾರ ಸಂಘ ಪರಿವಾರದ ಸದಸ್ಯರನ್ನು ಒಳಗೊಂಡ ಪೂರ್ವಭಾವಿ ಸಭೆ ಕನಕ ಮಂಟಪದಲ್ಲಿ ಶ್ರೀ ಪುತ್ತಿಗೆ  ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.

ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರು ಮಾತನಾಡಿ  ಗೀತಾಚಾರ್ಯ ಶ್ರೀಕೃಷ್ಣನ ಉಡುಪಿಯಲ್ಲಿ ಭಗವದ್ಗೀತೆಯ ಸಂದೇಶವನ್ನು ಸಾಕಷ್ಟು ವಿಸ್ತೃತವಾಗಿ ನಾವು ಮಾಡುತ್ತಿದ್ದು ಲಕ್ಷಾಂತರ ಮಂದಿ ಈಗಾಗಲೇ ಕೋಟಿ ಗೀತಾ ಲೇಖನಯಜ್ಞದಲ್ಲಿ ಭಾಗವಹಿಸಿದ್ದು ನಮಗೆ ಅತೀವ ಸಂತಸ ತಂದಿದೆ. ಆ ಪ್ರಯುಕ್ತ ನಡೆಯಲಿರುವ ಈ ಬೃಹತ್ ಗೀತೋತ್ಸವದಲ್ಲಿ ಭಗವದ್ಗೀತೆಯ ತತ್ತ್ವವನ್ನೇ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವ ಪ್ರಧಾನ ಮಂತ್ರಿ‌ ಮೋದಿ ಭಾಗವಹಿಸುತ್ತಿರುವುದು ನಿಜಕ್ಕೂ ಶ್ರೀಕೃಷ್ಣನ ಸಂಕಲ್ಪವಾಗಿದೆ. ಈ ಕಾರ್ಯಕ್ರಮವನ್ನು ಉಡುಪಿಯ ಸುತ್ತಮುತ್ತಲಿನ ಎಲ್ಲ ಜನರು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಗೀತಾಚಾರ್ಯ ಶ್ರೀಕೃಷ್ಣ ಮುಖ್ಯಪ್ರಾಣರ  ಕೃಪೆಗೆ ಪಾತ್ರರಾಗಬೇಕೆಂದು ಆಶಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀಪಾದರು  ಬಿಡುಗಡೆಗೊಳಿಸಿದರು. ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್ ಸುವರ್ಣ ಮತ್ತು ಗುರ್ಮೆ ಸುರೇಶ ಶೆಟ್ಟಿ, ಬಿಜೆಪಿ ಜಿಲಾಧ್ಯಕ್ಷ ನವೀನ್ ಶೆಟ್ಟಿ  ಕುತ್ಯಾರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿಯೂರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಸಹಕಾರ್ಯವಾಹ ವಾದಿರಾಜದ, ಮಾಜಿ ಶಾಸಕ ಲಾಲಾಜಿ ಮೆಂಡನ್, ಕಾರ್ಯಕ್ರಮ ಸಂಚಸಲಕ ಬೈಕಾಡಿ ಸುಪ್ರಸಾದ ಶೆಟ್ಟಿ ಮೊದಲಾದವರಿದ್ದರು.

ಪುತ್ತಿಗೆ ಮಠ ದಿವಾನರಾದ ನಾಗರಾಜ ಆಚಾರ್ಯ ಸ್ವಾಗತಿಸಿ, ಕಾರ್ಯಕ್ರಮದ ವಿವರ ನೀಡಿದರು. ಕಾರ್ಯದರ್ಶಿ ಪ್ರಸನ್ನಾಚಾರ್ಯ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles