Saturday, November 14, 2026

spot_img

ಬೈಂದೂರು ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲಿಗೆ ಅದ್ಧೂರಿ ಸ್ವಾಗತ

ಬೈಂದೂರು: ಬಹುಕಾಲದ ಬೇಡಿಕೆಯಾಗಿದ್ದ ಬೆಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬೈಂದೂರಿನ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಥಮ ನಿಲುಗಡೆ ದೊರೆತ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಸಂಭ್ರಮ ಮನೆಮಾಡಿತ್ತು. ನ. 13ರ ತಡರಾತ್ರಿ ಸುಮಾರು 1 ಗಂಟೆಗೆ ನಿಲ್ದಾಣಕ್ಕೆ ಆಗಮಿಸಿದ ರೈಲನ್ನು ಬೈಂದೂರು ಭಾಗದ ಜನರು ಅದ್ಧೂರಿಯಾಗಿ ಸ್ವಾಗತಿಸಿದರು.

ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ್ ರೈಲಿಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಆತ್ಮೀಯವಾಗಿ ಸ್ವಾಗತ ಕೋರಿದರು. ಬಳಿಕ ಹಸಿರು ನಿಶಾನೆ ತೋರುವ ಮೂಲಕ ರೈಲಿನ ಮುಂದಿನ ಪ್ರಯಾಣಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಗೌರವಾಧ್ಯಕ್ಷ ವೆಂಕಟೇಶ್ ಕಿಣಿ, ಅಧ್ಯಕ್ಷ ಜಯಾನಂದ್ ಹೋಬಳಿದಾರ್, ಕಾರು ಹಾಗೂ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಸುರೇಶ ಬಟವಾಡಿ, ಕೊಂಕಣ ರೈಲ್ವೆಯ ಎಸಿಎಂ ಮಂಜುನಾಥ್ ದೇವಾಡಿಗ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

ಬೈಂದೂರು ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲಿಗೆ ನಿಲುಗಡೆ ದೊರೆತಿರುವುದರಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಿಂದ ವೇಗದ ಹಾಗೂ ಸುಲಭ ರೈಲು ಸಂಪರ್ಕ ಲಭ್ಯವಾದಂತಾಗಿದೆ. ಈ ಭಾಗದ ಪ್ರವಾಸೋದ್ಯಮ ಮತ್ತು ಧಾರ್ಮಿಕ ಕ್ಷೇತ್ರದ ಸಂಪರ್ಕಕ್ಕೂ ಅನುಕೂಲವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಬಹುಕಾಲದಿಂದ ರೈಲು ನಿಲುಗಡೆಗಾಗಿ ಕಾಯುತ್ತಿದ್ದ ಬೈಂದೂರು ಭಾಗದ ಜನರ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಸ್ಥಳೀಯರು ಹರ್ಷ ವ್ಯಕ್ತಪಡಿಸಿ ರೈಲಿನ ಆಗಮನವನ್ನು ಸಂಭ್ರಮದಿಂದ ಸ್ವಾಗತಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles