Friday, March 6, 2026

spot_img

ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಬೈಂದೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಜೂರುನಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ.

ಜನತಾ ನ್ಯೂಸ್ ಶಾಲೆ ಮಾಧ್ಯಮ ಕಿರಿಮಂಜೇಶ್ವರ ಹಾಗೂ ಜನತಾ ಪಿಯು ಕಾಲೇಜು ಹೆಮ್ಮಾಡಿ ಇಲ್ಲಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ.

ಕನ್ನಡ ಭಾಷಣದಲ್ಲಿ ಸಂಜನಾ ಶೆಟ್ಟಿ, ಕನ್ನಡ ಪ್ರಬಂಧದಲ್ಲಿ ಸುಶ್ಮಿತಾ ನಾಯ್ಕ, ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಅವನಿ ಭಟ್, ಸಂಸ್ಕೃತ ಭಾಷಣದಲ್ಲಿ ಪ್ರಥಮ್ ಮತ್ತು ಭಾವಗೀತೆಯಲ್ಲಿ ಜಯಶ್ರೀ ಅವರು ಪ್ರಥಮ ಸ್ಥಾನ ಗಳಿಸಿದರು. ಅರೇಬಿಕ್ ಧಾರ್ಮಿಕ ಪಠಣದಲ್ಲಿ ಮಸೀಹಾ, ರಂಗೋಲಿಯಲ್ಲಿ ಭೂಮಿಕಾ, ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರತೀಕ್ಷಾ, ಕವ್ವಾಲಿಯಲ್ಲಿ ಆಹಿಲ್ ಮತ್ತು ತಂಡ, ಜಾನಪದ ನೃತ್ಯದಲ್ಲಿ ನವ್ಯ ಮತ್ತು ತಂಡ, ಚಿತ್ರಕಲೆಯಲ್ಲಿ ರಕ್ಷನ್ ಅವರು ದ್ವಿತೀಯ ಸ್ಥಾನ ಪಡೆದುಕೊಂಡರು. ಮಿಮಿಕ್ರಿಯಲ್ಲಿ ಅದ್ವಿಕ್, ಕನ್ನಡ ಭಾಷಣದಲ್ಲಿ ಸಿಂಚನಾ ಜಿ. ಭಟ್ ಹಾಗೂ ಕ್ವಿಜ್‌ನಲ್ಲಿ ತನ್ಮಯ್ ಮತ್ತು ಸಮೀಕ್ಷಾ ಅವರು ತೃತೀಯ ಸ್ಥಾನ ಗಳಿಸಿದರು.

ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯ ಶಿಕ್ಷಕಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದಲ್ಲೂ ಉತ್ತಮ ಸಾಧನೆಗೈಯಲಿ ಎಂದು ಶುಭ ಹಾರೈಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles