Friday, October 16, 2026

spot_img

ಬ್ರಹ್ಮಾವರದಲ್ಲಿ ಅ. 17ರಿಂದ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ : ಕರಾವಳಿ ಕರ್ನಾಟಕದ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳ ಪರಿಚಯಿಸುವ ಉದ್ದೇಶದಿಂದ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಅ. 17 ಮತ್ತು 18ರಂದು ಕೃಷಿ ಮತ್ತು ತೋಟಗಾರಿಕೆ ಮೇಳ-2026 ಆಯೋಜಿಸಲಾಗಿದೆ.ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಈ ಮೇಳದಲ್ಲಿ 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಕೃಷಿ ಯಂತ್ರೋಪಕರಣಗಳು, ಬೀಜಗಳು, ಸಸಿಗಳು ಹಾಗೂ ವಿವಿಧ ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಭತ್ತದ ಹೊಸ ತಳಿಗಳು, ಅಡಿಕೆ, ತೆಂಗು, ಗೋಡಂಬಿ, ಮಾವು ಮತ್ತು ರಬ್ಬರ್ ಬೆಳೆಗಳ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನು ಸಾಕಣೆ, ಜೇನು ಸಾಕಣೆ, ಎರೆಹುಳು ಗೊಬ್ಬರ ತಯಾರಿಕೆ, ಡ್ರೋನ್ ಬಳಕೆ, ಹನಿ ನೀರಾವರಿ ಹಾಗೂ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅನ್ವಯಗಳು ಮೇಳದ ಪ್ರಮುಖ ಆಕರ್ಷಣೆಗಳಾಗಿವೆ. ರೈತರಿಗಾಗಿ ನಾಲ್ಕು ತಾಂತ್ರಿಕ ಗೋಷ್ಠಿಗಳನ್ನು ಆಯೋಜಿಸಲಾಗಿದ್ದು, ಭವಿಷ್ಯದ ತೋಟಗಾರಿಕಾ ಬೆಳೆಗಳು, ಅಡಿಕೆ ಬೆಳೆಯ ಕೀಟ ಮತ್ತು ರೋಗಗಳ ನಿರ್ವಹಣೆ, ಲಾಭದಾಯಕ ಹೈನುಗಾರಿಕೆ ಹಾಗೂ ಮೀನುಗಾರಿಕೆ ಮತ್ತು ರೈತ ಉತ್ಪಾದಕ ಕಂಪನಿಗಳ ಸವಾಲುಗಳ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆರು ಪ್ರಗತಿಪರ ರೈತರನ್ನು ಸನ್ಮಾನಿಸಲಾಗುವುದು. ರೈತರಿಗೆ ಉಪಯುಕ್ತವಾದ ಏಳು ತಾಂತ್ರಿಕ ಕೈಪಿಡಿಗಳನ್ನೂ ಬಿಡುಗಡೆ ಮಾಡಲಾಗುವುದು. ಮೇಳವನ್ನು ಸಚಿವ ರಿಜ್ವಾನ್ ಅರ್ಷದ್ ಉದ್ಘಾಟಿಸಲಿದ್ದು, ಮಳಿಗೆಗಳನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ರೈತರು ಹಾಗೂ ಸಾರ್ವಜನಿಕರಿಗೆ ಊಟ, ಉಪಾಹಾರ, ಕುಡಿಯುವ ನೀರು ಮತ್ತು ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕದ ವಿವಿಧ ಜಿಲ್ಲೆಗಳು ಹಾಗೂ ಕಾಸರಗೋಡಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles