Thursday, June 19, 2025

spot_img

ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಅರ್ಜಿ: ಜೂನ್‌ 27 ವಿಸ್ತರಣೆ

ಬ್ರಹ್ಮಾವರ : 2025-26ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ಜೂನ್‌ 06. 2025 ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಮುಂದುವರಿದು, ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಜೂನ್ 27 2025ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 27 2025ರ ಒಳಗೆ ಸಲ್ಲಿಸಬಹುದಾಗಿದೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45% (ಕನಿಷ್ಠ ಶೇ.40% ಪ.ಜಾ. ಮತ್ತು ಪ.ಪಂ./ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸುಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50% ರಷ್ಟುಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್‌ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles