Wednesday, March 4, 2026

spot_img

ಭಗವಾನ್ ಬಿರ್ಸಾ ಮುಂಡ ಜಯಂತಿ ಅಂಗವಾಗಿ ಜನಜಾತಿಯ ಗೌರವ್ ದಿವಸ್ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಭಗವಾನ್ ಬಿರ್ಸಾ ಮುಂಡರವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮವು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೊರ್ಟ್ ಹಾಲ್ ನಲ್ಲಿ ನಡೆಯಿತು.

 ಕಾರ್ಯಕ್ರಮ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಬುಡಕಟ್ಟು ಸಮುದಾಯದವರು ಮುಖ್ಯವಾಹಿನಿಗೆ ಬರಲು ವಿವಿಧ ಕಾರ್ಯಕ್ರಮಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳಿ, ಐ.ಟಿ.ಡಿ.ಪಿ ಯೋಜನಾ ಸಮನ್ವಯಾಧಿಕಾರಿ ನಾರಾಯಣಸ್ವಾಮಿ ಎಂ, ಕೊರಗ ಮತ್ತು ಮಲೈಕುಡಿ ಸಮುದಾಯದ ಮುಖಂಡರು ಹಾಗೂ ಮತ್ತಿರರು ಹಾಜರಿದ್ದರು. ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಅಧಿಕ್ಷಕ ವಿಶ್ವನಾಥ ನಿರೂಪಿಸಿ, ವಂದಿಸಿದರು

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles