Saturday, October 25, 2025

spot_img

ಭ್ರೂಣಲಿಂಗ ಭ್ರೂಣಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಸೂಕ್ತ ಬಹುಮಾನ : ಡಾ. ಲೆಸ್ಸಿ ಲುವಿಸ್

ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು, ಹತ್ಯೆ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕೃತ್ಯವನ್ನು ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿಗಳನ್ನು ಸೂಕ್ತ ಪ್ರಾಧಿಕಾರಕ್ಕೆ ನೀಡಬೇಕು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಅಧ್ಯಕ್ಷೆ ಡಾ. ಲೆಸ್ಸಿ ಲುವಿಸ್ ಕರೆ ನೀಡಿದರು.

 ಅವರು ಇಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣು ಮಕ್ಕಳು ಜೀವಿಸಲು ಅವಕಾಶ ಮಾಡಿಕೊಡಬೇಕು. ಅವುಗಳನ್ನು ಭ್ರೂಣದಲ್ಲಿಯೇ ಹತ್ಯೆ ಮಾಡಿದ್ದಲ್ಲಿ ಲಿಂಗಾನುಪಾತದಲ್ಲಿ ತಾರತಮ್ಯ ಉಂಟಾಗುತ್ತದೆ. ಭ್ರೂಣಲಿಂಗ ಪತ್ತೆ ಮಾಡುವ ವ್ಯಕ್ತಿಗಳು, ಸ್ಕ್ಯಾನಿಂಗ್ ಸೆಂಟರ್‌ಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ಅವರುಗಳಿಗೆ ಸರಕಾರದ ವತಿಯಿಂದ 50,000 ರೂ. ದಿಂದ 1 ಲಕ್ಷ ರೂ. ವರೆಗೆ ಸೂಕ್ತ ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.

ಭ್ರೂಣಲಿಂಗ ಪತ್ತೆ ಮಾಡುವ ವೈದ್ಯಾಧಿಕಾರಿಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲೀಕರುಗಳಿಗೆ ಕಾನೂನಿನ ಅಡಿಯಲ್ಲಿ ಹತ್ತು ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಇದೇ ಅಪರಾಧ ಪುನರಾವರ್ತನೆಯಾದಲ್ಲಿ ಐವತ್ತು ಸಾವಿರ ರೂ. ದಂಡದೊಂದಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಸರಕಾರದ ಅನುಮತಿ ಪತ್ರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಸ್ಕ್ಯಾನಿಂಗ್ ಯಂತ್ರ ನಿರ್ವಹಣೆ ಮಾಡಿರುವ ಬಗ್ಗೆ ರಿಜಿಸ್ಟರ್ ಹಾಗೂ ದಾಖಲೆಗಳನ್ನು ನಿಯಮಾನುಸಾರ ಮಾಡಬೇಕು. ತಪ್ಪಿದ್ದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ 2025 ರ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗೆ 1000 ಗಂಡು ಮಕ್ಕಳಿಗೆ 997 ಹೆಣ್ಣು ಮಕ್ಕಳಿದ್ದಾರೆ. ಹೆಣ್ಣು ಮಕ್ಕಳ ಲಿಂಗಾನುಪಾತ ಕಡಿಮೆ ಇರುವುದರಿಂದ ಆಗುವ ಸಾಮಾಜಿಕ ತೊಂದರೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ,ಜಿಲ್ಲಾ ಆಸ್ಪತ್ರೆ ರೇಡಿಯಾಲಜಿಸ್ಟ್ ಡಾ. ಆಮ್ನಾ ಹೆಗ್ಡೆ, ಕೆ.ಎಂ.ಸಿ ಮಣಿಪಾಲ ಪ್ರಸೂತಿ ತಜ್ಞ ಡಾ. ಪ್ರತಾಪ್ ಕುಮಾರ್, ಸಮಾಜ ಸೇವಕಿ ತಾರಾ ಆಚಾರ್ಯ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles