ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಂದಾರ್ತಿ ಶ್ರೀ ಆದಿ ಸುಬ್ರಹ್ಮಣ್ಯ ದೇವರ ನೂತನ ಶಿಲಾಮಯ ದೇವಸ್ಥಾನವನ್ನು ಸುಬ್ರಹ್ಮಣ್ಯ ಮಂಜರ ಸವಿನೆನಪಿಗಾಗಿ ದಾನಿಗಳಾದ ಶ್ರೀಮತಿ ವಿಶಾಲಾಕ್ಷಿ ಮತ್ತು ಮಕ್ಕಳು ಮೊಮ್ಮಕ್ಕಳು ಮಾರಣಕಟ್ಟೆ ಇವರಿಂದ ಜೀರ್ಣೋದ್ಧರಗೊಳಿಸಿ ಪುನಃ ಪ್ರತಿಷ್ಠೆಯೊಂದಿಗೆ ಲೋಕಾರ್ಪಣೆ ಶ್ರೀ ದೇವಾಲಯ ವತಿಯಿಂದ ನೆರವೇರಿತು.

ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಮರಣಕಟ್ಟೆಯ ಕೃಷ್ಣಮೂರ್ತಿ ಮಂಜರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರಾದ ಕೆ.ರಘುಪತಿ ಭಟ್ ಅವರು ಉಪಸ್ಥಿತರಿದ್ದರು..


