Friday, May 9, 2025

spot_img

ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸುವ ಮೂಲಕ ಅವರ ಆರೋಗ್ಯ ರಕ್ಷಣೆಗೆ ಮುಂದಾಗಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ : ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ಮಕ್ಕಳಿಗೆ ನೀಡುವುದರ ಮೂಲಕ ಅವರುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕರೆ ನೀಡಿದರು. ಅವರು ಇಂದು ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ
ಲಸಿಕಾ ವಾರ – ಜಿಲ್ಲಾ ಮಟ್ಟದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿರುವ ಶೂನ್ಯ ಡೋಸ್ ಮಕ್ಕಳು, ದಡಾರ ರುಬೆಲ್ಲಾ ಲಸಿಕೆ ತಪ್ಪಿ ಹೋದ ಮಕ್ಕಳು ಅಥವಾ ಲಸಿಕೆಯಿಂದ ವಂಚಿತರಾದ ಎಲ್ಲಾ ಮಕ್ಕಳು ಈ ಲಸಿಕಾ ಸಪ್ತಾಹದ ಪ್ರಯೋಜನವನ್ನು ಪಡೆದುಕೊಂಡು ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಜವಬ್ದಾರಿಯಿಂದ ಲಸಿಕಾ ಕಾರ್ಯ ನಿರ್ವಹಿಸುವ ಮೂಲಕ ಯಾವುದೇ ಒಂದು ಮಗುವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ದಡಾರ ರುಬೆಲ್ಲಾ ನಿರ್ಮೂಲನೆ ಸಾಧಿಸಲು ನೆರವಾಗಬೇಕು ಎಂದರು. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಜಿ ಹುಬ್ಬಳಿ ರವರು ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜೋತ್ಸ್ನಾ ಬಿ.ಕೆ ಪ್ರಾಸ್ಥಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾತ್ವಿಕ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಮಕ್ಕಳು ಮತ್ತು ಪೋಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್.ಹೆಚ್ ಸ್ವಾಗತಿಸಿ, ನಿರೂಪಿಸಿದರು. ಹಿರಿಯ ಆರೋಗ್ಯಾ ನಿರೀಕ್ಷಣಾಧಿಕಾರಿ ಸತೀಶ್ ರಾವ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles