ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ, ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಡಿ.ಇ.ಐ.ಸಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ಹೃದ್ರೋಗ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು.

ಶಿಬಿರದಲ್ಲಿ ಮಂಗಳೂರು ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದ್ರೋಗ ತಜ್ಞರಾದ ಡಾ.ಪ್ರೇಮ ಆಳ್ವ ಹಾಗೂ ಡಾ.ನಿಕಿಲ್ ಸ್ವಪ್ನಿಲ್, ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಮಹಾದೇವ ಭಟ್, ಸಂಯೋಜಕರಾದ ಗೋಪಾಲ ಕೃಷ್ಣ, ಅಂಕುರ್, ಡಿಇಐಸಿ ಮ್ಯಾನೇಜರ್ ಶ್ರೀನಿವಾಸ್, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟು 60 ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.