Wednesday, March 4, 2026

spot_img

ಮಣಿಪಾಲದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ತರಬೇತಿ ಕಾರ್ಯಾಗಾರ..

ಉಡುಪಿ: ದೇಶದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಗುರಿಯೊಂದಿಗೆ ಡಿಸೆಂಬರ್ 21ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು.  ಕೆಎಂಸಿ ಇಂಟರ್ಯಾಕ್ಟ್ ಸಭಾಂಗಣದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಕೆ.ಎಂ.ಸಿ. ಮಣಿಪಾಲ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದಲ್ಲಿ ಈ ತರಬೇತಿ ಆಯೋಜಿಸಲಾಯಿತು.

 ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಕುರಿತು ಆರೋಗ್ಯ ಕಾರ್ಯಕರ್ತರು ಹಾಗೂ ಸ್ವಯಂಸೇವಕರಿಗೆ ಮಾರ್ಗದರ್ಶನ ನೀಡಲಾಯಿತು. ಡಿಸೆಂಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಸರ್ಕಾರಿ ಆರೋಗ್ಯ ಕೇಂದ್ರಗಳ ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದರ ಜೊತೆಗೆ, ಡಿಸೆಂಬರ್ 22ರಿಂದ 24ರವರೆಗೆ ಮನೆ–ಮನೆ ಭೇಟಿ ಕಾರ್ಯಕ್ರಮ ನಡೆಯಲಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು.

 ತರಬೇತಿಯಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಡಾ. ಯಶ್ ಅಲೋಕ್ ಹಾಗೂ ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಾಮಿನಿ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಡಾ. ಅಶ್ವಿನಿ ಕುಮಾರ್ ಮಾರ್ಗದರ್ಶನ ನೀಡಿದರು. ಸುಮಾರು 150 ಆರೋಗ್ಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles