ಉಡುಪಿ : ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತ ಘಟನೆ ಸಂಭವಿಸಿದೆ.

ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕದ ಮೇಲೇರಿ ನಿಂತಿದ್ದು, ಅಪಘಾತದ ರಭಸಕ್ಕೆ ಡಿವೈಡರ್‌ನ ತಡೆಬೇಲಿ ಹಾಗೂ ಬಸ್‌ನ ಮುಂಭಾಗ ಹಾನಿಗೊಳಗಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಮಾಹಿತಿ ಪಡೆದ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


