Wednesday, May 20, 2026

spot_img

ಮಣಿಪಾಲ ಟೈಗರ್ ಸರ್ಕಲ್ ಬಳಿ ಫುಟ್ಪಾತ್ ಅತಿಕ್ರಮಣ ತೆರವು..

ಉಡುಪಿ : ಮಣಿಪಾಲದ ಟೈಗರ್ ಸರ್ಕಲ್ ಸಮೀಪ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳ ವಿರುದ್ಧ ಇಂದು ನಗರಸಭೆ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಫುಟ್ಪಾತ್‌ಗಳನ್ನು ಅತಿಕ್ರಮಿಸಿ ತರಕಾರಿ ಸೇರಿದಂತೆ ವಿವಿಧ ವಸ್ತುಗಳ ವ್ಯಾಪಾರ ನಡೆಸಲಾಗುತ್ತಿದ್ದು, ಇದರಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಅಲ್ಲದೆ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು.

ಈ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸರ ಸಹಕಾರದೊಂದಿಗೆ ಸ್ಥಳಕ್ಕೆ ತೆರಳಿ ಅತಿಕ್ರಮಣ ತೆರವುಗೊಳಿಸಿದರು. ಫುಟ್ಪಾತ್‌ಗಳಲ್ಲಿ ಇಡಲಾಗಿದ್ದ ತಾತ್ಕಾಲಿಕ ಮಳಿಗೆಗಳು, ವ್ಯಾಪಾರ ಸಾಮಗ್ರಿಗಳು ಹಾಗೂ ಇತರೆ ಅಡೆತಡೆಗಳನ್ನು ತೆರವು ಮಾಡಲಾಯಿತು.

ಅಧಿಕಾರಿಗಳು ಮುಂದಿನ ದಿನಗಳಲ್ಲಿ ಮತ್ತೆ ಅತಿಕ್ರಮಣ ನಡೆಸದಂತೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರ ಅನುಕೂಲ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಇಂತಹ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles