Sunday, August 2, 2026

spot_img

ಮಣಿಪಾಲದ ಪಬ್‌-ಬಾರ್‌ಗಳ ಮೇಲೆ ಪೊಲೀಸರ ದಿಢೀರ್ ದಾಳಿ; 21ವರ್ಷದೊಳಗಿನ 88ಮಂದಿ ಪತ್ತೆ, ಆರು ಪ್ರಕರಣ ದಾಖಲು

ಉಡುಪಿ : ಮಣಿಪಾಲದಲ್ಲಿ 21 ವರ್ಷದೊಳಗಿನ ಯುವಕ-ಯುವತಿಯರಿಗೆ ಮದ್ಯಪಾನ ಹಾಗೂ ಹುಕ್ಕಾ ಸೇವನೆಗೆ ಅವಕಾಶ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಶನಿವಾರ ರಾತ್ರಿ ವಿವಿಧ ಪಬ್‌ ಹಾಗೂ ಬಾರ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ, ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ, ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ ಆರು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು.

ಕಾರ್ಯಾಚರಣೆಯ ವೇಳೆ ಮಣಿಪಾಲದ ಎಕ್ಸ್ಟಸಿ 7ನೇ ಹೆವನ್ ಪಬ್, ಡೌನ್ ದ ರೋಡ್ ಬಾರ್ ಅಂಡ್ ರೆಸ್ಟೋರೆಂಟ್, ಡೆಕ್ಸ್ಟರ್ ಬಾರ್ ಅಂಡ್ ರೆಸ್ಟೋರೆಂಟ್, ಈಶ್ವರನಗರದ ಸಾಯಿ ಸಾಗರ್ ಬಾರ್ ಅಂಡ್ ರೆಸ್ಟೋರೆಂಟ್ (ನಾಚ್ ಆನ್ ಟಾಪ್ ರೆಸ್ಟೋ ಬಾರ್), ಡೀ ಟೀ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಜನನಿ ಬಾರ್ ಅಂಡ್ ರೆಸ್ಟೋರೆಂಟ್ (ಎಡ್ಜ್ ಬಾರ್ ಅಂಡ್ ರೆಸ್ಟೋರೆಂಟ್) ಸೇರಿದಂತೆ ಆರು ಸ್ಥಳಗಳಲ್ಲಿ ತಪಾಸಣೆ ನಡೆಸಲಾಯಿತು.

ತಪಾಸಣೆ ವೇಳೆ 21 ವರ್ಷದೊಳಗಿನ 64 ಯುವಕರು, 23 ಯುವತಿಯರು ಹಾಗೂ 17 ವರ್ಷದ ಒಬ್ಬ ಅಪ್ರಾಪ್ತ ಬಾಲಕ ಸೇರಿ ಒಟ್ಟು 88 ಮಂದಿ ಮದ್ಯ ಸೇವಿಸುತ್ತಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಬಾರ್ ಮತ್ತು ಪಬ್‌ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಆರು ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಅಪ್ರಾಪ್ತರು ಹಾಗೂ 21 ವರ್ಷದೊಳಗಿನವರಿಗೆ ಮದ್ಯಪಾನಕ್ಕೆ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಬಾರ್ ಮತ್ತು ಪಬ್‌ಗಳ ಪರವಾನಗಿಯನ್ನು ಅಮಾನತುಗೊಳಿಸುವ ಕುರಿತು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಕೋಟ್ಪಾ ಕಾಯ್ದೆ ಹಾಗೂ ಕರ್ನಾಟಕ ಅಬಕಾರಿ ನಿಯಮಾವಳಿಗಳನ್ನು ಉಲ್ಲಂಘಿಸಿ ಅಪ್ರಾಪ್ತರು ಮತ್ತು 21 ವರ್ಷದೊಳಗಿನವರಿಗೆ ಪ್ರವೇಶ ನೀಡಿ ಮದ್ಯಪಾನಕ್ಕೆ ಅವಕಾಶ ನೀಡುವ ಬಾರ್‌, ಪಬ್‌ ಹಾಗೂ ರೆಸ್ಟೋರೆಂಟ್‌ಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ಮುಂದುವರಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles