Friday, March 20, 2026

spot_img

ಮತಾಂತರ ವಿರೋಧಿಸಿ ಉಡುಪಿಯಲ್ಲಿ ಉದ್ವಿಗ್ನತೆ: ಕಾರ್ಯಕರ್ತರ ಪ್ರತಿಭಟನೆ, ಪೊಲೀಸರು ವಶಕ್ಕೆ..

ಉಡುಪಿ: ಮತಾಂತರ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ ಪರಿಣಾಮ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ. ಫೆಲೋಶಿಪ್ ಆಫ್ ಚರ್ಚ್ ವತಿಯಿಂದ ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ವಿವಾದಿತ ಭಾಷಣಗಾರ ಮೋಹನ್ ಸಿ. ಲಾಝರಸ್ ಭಾಗವಹಿಸುತ್ತಿರುವ ಹಿನ್ನೆಲೆ, ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

 ಕಾರ್ಯಕ್ರಮಕ್ಕೆ ಆಯೋಜಕರು ನ್ಯಾಯಾಲಯದ ಮೂಲಕ ಅನುಮತಿ ಪಡೆದುಕೊಂಡಿದ್ದು, ಕೆಲವು ಕಟ್ಟುನಿಟ್ಟಿನ ಶರತ್ತುಗಳನ್ನು ವಿಧಿಸಿ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿತ್ತು. ಈ ನಡುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೊರಟ ಹಿಂದೂ ಕಾರ್ಯಕರ್ತರನ್ನು ಪೊಲೀಸರು ತಡೆದರು. ಪೊಲೀಸರ ಕ್ರಮಕ್ಕೆ ಆಕ್ರೋಶಗೊಂಡ ಕಾರ್ಯಕರ್ತರು ಗೋವಿಂದ ಕಲ್ಯಾಣ ಮಂಟಪದ ಆವರಣದಲ್ಲಿ ಸೇರಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

 ಮತಾಂತರ ನಡೆಸುವ ವ್ಯಕ್ತಿಗೆ ವೇದಿಕೆ ಕಲ್ಪಿಸಿರುವುದು ತಪ್ಪು ಎಂದು ಆಕ್ಷೇಪ ವ್ಯಕ್ತಪಡಿಸಿದ ಅವರು, ಕಾರ್ಯಕ್ರಮದಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ಉಂಟಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ಪರಿಸ್ಥಿತಿ ನಿಯಂತ್ರಣದಲ್ಲಿರಿಸಲು ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದರು.

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಮಣಿಪಾಲ ಪೊಲೀಸ್ ಠಾಣೆಗೆ ಕರೆದೊಯ್ದರು. ನಂತರ ಪರಿಸ್ಥಿತಿ ಶಾಂತಗೊಂಡಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles