Sunday, June 29, 2025

spot_img

ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ : ಮೀನುಗಾರರಿಂದ ಅರ್ಜಿ ಆಹ್ವಾನ

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ
ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಘಟಕಗಳ ವಿವರ: ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲಾಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, 10 ಟನ್ ಸಾಮರ್ಥ್ಯದ ಐಸ್ ಪ್ಲಾಂಟ್/ ಕೋಲ್ಡ್ ಸ್ಟೋರೇಜ್ ನಿರ್ಮಾಣ‌ ಹಾಗೂ ಮನರಂಜನಾ ಮಿನುಗಾರಿಕೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles