ಬ್ರಹ್ಮಾವರ: ಯುವತಿಯ ಮನೆಯವರು ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿಯ ಹುಟ್ಟಿದ ದಿನದಂದೇ ಪ್ರೇಮಿ ಯುವಕ ಚಾಕುವಿನಿಂದ ಇರಿದ ಘಟನೆ ಕೊಕ್ಕರ್ಣೆಯಲ್ಲಿ ನಡೆದಿದೆ. ರಕ್ಷಿತಾ ಪೂಜಾರಿ (24) ಚಾಕು ಇರಿತಕ್ಕೆ ಒಳಗಾದ ಯುವತಿ.

ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಬಳಿ ಈ ಘಟನೆ ನಡೆದಿದೆ. ಆರೋಪಿ ಯುವಕ, ಯುವತಿಯನ್ನು ಬಹಳ ಹಿಂದಿನಿಂದಲೂ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಮದುವೆ ಆಗುವಂತೆ ಒತ್ತಾಯಿಸುತ್ತಿದ್ದ ಯುವಕನನ್ನು, ಯುವತಿ ಮನೆಯವರು ನಿರಾಕರಿಸಿದ್ದರು. ಇದೇ ವಿಚಾರವಾಗಿ ಜಗಳವಾಗುತ್ತಿತ್ತು ಎನ್ನಲಾಗಿದೆ. ಇಂದು ಬೆಳಿಗ್ಗೆ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಬೆನ್ನತ್ತಿ ಬಂದ ಯುವಕ, ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈಯ್ಯಲು ಯತ್ನಿಸಿದ್ದಾನೆ. ಕುತ್ತಿಗೆ ಮತ್ತು ಎಡ, ಬಲ ಪಕ್ಕೆಗೆ ಚಾಕು ಇರಿದ ಹಿನ್ನಲೆಯಲ್ಲಿ ಯುವತಿ ಗಂಭಿರವಾಗಿ ಗಾಯಗೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣ ಸ್ಥಳೀಯರು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಹೆಚ್ಚಿನ ಮಾಹಿತಿ ನೀಡುವುದಾಗಿ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.


