Wednesday, March 4, 2026

spot_img

ಮಧ್ಯಪ್ರಾಚ್ಯ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗೆ ಸಹಾಯವಾಣಿ

ಉಡುಪಿ : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾದ ಅಸ್ಥಿರ ಪರಿಸ್ಥಿತಿಯಿಂದ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಸಾರ್ವಜನಿಕರಿಗಾಗಿ ಸಹಾಯವಾಣಿ ಪ್ರಕಟಿಸಿದೆ. ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದರ ಪರಿಣಾಮವಾಗಿ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಭಾರತೀಯ ರಾಯಭಾರಿ ಕಚೇರಿಗಳಿಂದ ನೀಡಲಾಗುವ ಸೂಚನೆಗಳನ್ನು ಜಿಲ್ಲಾಡಳಿತ ನಿರಂತರವಾಗಿ ಪರಿಶೀಲಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿ ಮತ್ತು ನೆರವಿಗಾಗಿ ಕೆಳಗಿನ ಸಂಖ್ಯೆಗಳ ಸಂಪರ್ಕಿಸಬಹುದು:
ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ – 0820-2574802, ಟೋಲ್ ಫ್ರೀ: 1077.
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ – 080-22340676, 080-22253707, ಟೋಲ್ ಫ್ರೀ: 1070.

ಮಧ್ಯಪ್ರಾಚ್ಯ ದೇಶಗಳಲ್ಲಿ ಇರುವ ಜಿಲ್ಲೆಯವರು ಅಲ್ಲಿನ ಸ್ಥಳೀಯ ಆಡಳಿತ ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಸಂಬಂಧಿತ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ ‘ಸಾರಥಿ ಸಹಾಯತಾ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್‌ಆರ್‌ಆರ್‌ಒ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಮನವಿ ಮಾಡಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles