Friday, February 6, 2026

spot_img

ಮನರೇಗಾ ವಾಪಸಾತಿಗೆ ಆಗ್ರಹಿಸಿ ಪೆರ್ಡೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..

ಉಡುಪಿ : ಯು.ಪಿ.ಎ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ ಯೋಜನೆಯನ್ನು ದುರ್ಬಲಗೊಳಿಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆರ್ಡೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

 ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕೃಷಿಕರು ತಮ್ಮ ಸ್ವಂತ ಜಮೀನಿನಲ್ಲಿ ಬಾವಿ ತೋಡು, ತೋಟ ನಿರ್ಮಾಣ, ಹೈನುಗಾರಿಕೆ, ಎಡೆಸಸಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಮೂಲಕ ಸ್ವತಃ ಉದ್ಯೋಗ ನಿರ್ಮಿಸಿಕೊಂಡು ಆದಾಯ ಗಳಿಸಲು ಅವಕಾಶ ನೀಡಿದ ಏಕೈಕ ಯೋಜನೆ ಉದ್ಯೋಗ ಖಾತ್ರಿ ಯೋಜನೆ. ಇಂತಹ ಬಡವರ ಬದುಕಿಗೆ ಆಸರೆಯಾದ ಜನಪರ ಯೋಜನೆಯನ್ನು ದುರ್ಬಲಗೊಳಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ಹೇಳಿದರು. ಯು.ಪಿ.ಎ ಸರ್ಕಾರ ಬಡವರಿಗೆ ವರ್ಷಕ್ಕೆ 100 ದಿನಗಳ ಕೆಲಸ ನೀಡುವ ಮೂಲಕ ಜನಸ್ನೇಹಿ ಆಡಳಿತ ನೀಡಿತ್ತು ಎಂದು ಅವರು ಸ್ಮರಿಸಿದರು.

ಪ್ರತಿಭಟನೆಯಲ್ಲಿ ಕಾಪು ಉತ್ತರ ಬ್ಲಾಕ್ ಉಸ್ತುವಾರಿ ನೀರೆ ಕೃಷ್ಣ ಶೆಟ್ಟಿ , ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮಂಡಲ ಪ್ರಧಾನ ಶಾಂತಾರಾಮ ಸೂಡ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತ ರೈ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಪೂಜಾರಿ, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲಿಯಾನ್, ದಯಾನಂದ ಶೆಟ್ಟಿ, ಶೋಭಾ ಗಾಮ್ಸ್, ಲಕ್ಷ್ಮಿ, ಉದಯ್ ಕುಲಾಲ್, ರಾಘವೇಂದ್ರ, ಗಾಯತ್ರಿ, ಜಯಶ್ರೀ ಕುಲಾಲ್, ಎಸ್‌ಟಿ ಘಟಕದ ಬ್ಲಾಕ್ ಅಧ್ಯಕ್ಷ ರಾಮದಾಸ್ ನಾಯ್ಕ್, ಮಾಜಿ ಸಚಿವರ ಆಪ್ತ ಸಹಾಯಕ ನಬೀಲ್ ಉದ್ಯಾವರ, ರಾಜು ಸುವರ್ಣ, ಕಾರ್ತಿಕ್ ಆಚಾರ್ಯ, ಶಿವಕುಮಾರ್ ಸೇರಿದಂತೆ ಉದ್ಯೋಗ ಖಾತ್ರಿ ಯೋಜನೆಯ ಪಾಲಾನುಭವಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles