ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಕಾಬೆಟ್ಟು ಎಂಬಲ್ಲಿ ನಡೆದಿದೆ. ಮುಜೀಬ್ ರೆಹಮಾನ್ ಎಂಬವರ ಮನೆಯ ಮುಂದಿನ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಕೋಣೆಯ 2 ಕಪಾಟಿನಲ್ಲಿರಿಸಿದ್ದ 30,000ರೂ., ವಾಚ್, 2 ಬೆಳ್ಳಿಯ ಚೈನ್, ಬೆಳ್ಳಿಯ ಬ್ರಾಸ್ಲೆಟ್ ಕಳವು ಮಾಡಿಕೊಂಡು ಹೋಗಿದ್ದಾರೆ. ಇವುಗಳ ಒಟ್ಟು ಮೌಲ್ಯ 51ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.