ಉಡುಪಿ : ಮಹಿಳೆಯನ್ನು ಮರಕ್ಕೆ ಕಟ್ಟಿ ಕಪಾಳ ಮೋಕ್ಷ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು.

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋ ಜೊತೆಗೆ ಈ ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಲಕ್ಷ್ಮೀಬಾಯಿ ಎಂಬವರು ಹಲ್ಲೆ ಮಾಡಿರು ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವನನ್ನು ಸದ್ಯ ಪೊಲೀಸ್ ರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಮಹಿಳೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಲ್ಲೆಗೊಳಗಾದ ಮಹಿಳೆಯ ದೂರಿನಂತೆ ಪೊಲೀಸ್ ಆರೋಪಿಗಳನ್ನು ಹುಡುಕಿ ವಶಕ್ಕೆ ಪಡೆದಿದ್ದಾರೆ.