Wednesday, March 4, 2026

spot_img

ಮಲ್ಲಾರು ಮನೆ ಕಳವು ಪ್ರಕರಣ: ಅಂತರ್‌ರಾಜ್ಯ ಕಳ್ಳನ ಬಂಧನ..

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕುದ ಮಲ್ಲಾರು ಗ್ರಾಮದಲ್ಲಿ ನಡೆದ ಮನೆ ಕಳವು ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕುಖ್ಯಾತ ಅಂತರ್‌ರಾಜ್ಯ ಕಳ್ಳ ಉಮೇಶ್ ಬಳೆಗಾರ/ಉಮೇಶ್ ಪಿ/ ಉಮೇಶ್ ರೆಡ್ಡಿಯನ್ನು ಬಂಧಿಸಿದ್ದಾರೆ.

 ಡಿಸೆಂಬರ್ 4, 2025ರಂದು ಹಗಲು ವೇಳೆ ಮನೆಗೆ ಹೊರಗಿನಿಂದ ಬೀಗ ಹಾಕಿದ್ದ ಸಂದರ್ಭ, ವಿದ್ಯುತ್ ಮೀಟರ್ ಬಾಕ್ಸ್‌ನಲ್ಲಿ ಇಡಲಾಗಿದ್ದ ಕೀಲಿಯನ್ನು ಬಳಸಿ ಮನೆ ಪ್ರವೇಶಿಸಿದ ಆರೋಪಿಯು, ಸುಮಾರು 3.90 ಲಕ್ಷ ಮೌಲ್ಯದ 72 ಗ್ರಾಂ ಚಿನ್ನಾಭರಣ ಹಾಗೂ 1,500 ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧಿತ ಆರೋಪಿ ತಮಿಳುನಾಡು ಮೂಲದವನಾಗಿದ್ದು, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದ ವಿವಿಧ ಠಾಣೆಗಳಲ್ಲಿ ಒಟ್ಟು 30ಕ್ಕೂ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಈ ಪೈಕಿ ಹಲವು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಯಾಗಿದೆ. ಆರೋಪಿಯ ವಿರುದ್ಧ ಹಲವು ಠಾಣೆಗಳಲ್ಲಿ ಜಾಮೀನು ರಹಿತ ಬಂಧನ ವಾರಂಟ್‌ಗಳೂ ಜಾರಿಯಲ್ಲಿವೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles