ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು, ಆಯುಷ್ಮಾನ್ ಆರೋಗ್ಯ ಕೇಂದ್ರ ಮಲ್ಲಾರ್, ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಎನ್.ಸಿ.ಡಿ ಘಟಕ ಹಾಗೂ ಪುರಸಭೆ ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಮಲ್ಲಾರ್ ಫಕೀರ್ನಕಟ್ಟೆ ಶ್ರೀ ನಾರಾಯಣಗುರು ಬಿಲ್ಲವ ಸಂಘದಲ್ಲಿ ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಯಿತು.

ಶಿಬಿರವನ್ನು ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ಡಾ. ಪ್ರೇಮ್ ಕಣ್ಣಿನ ಆರೋಗ್ಯದ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ನೂರುದ್ದೀನ್, ಶೈಲೇಶ್, ಎನ್.ಸಿ.ಡಿ ವೈದ್ಯಾಧಿಕಾರಿ ಡಾ. ದೀಕ್ಷಾ, ಸಂಯೋಜಕರಾದ ಹರ್ಷ, ಮಾಸ್ಟರ್ ಮಲ್ಲಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿರ್ಮಲಾ ಮೆಂಡನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿ, ಸಮುದಾಯ ಆರೋಗ್ಯಾಧಿಕಾರಿ ಶೆರೋನ್, ಆರೋಗ್ಯ ನಿರೀಕ್ಷಣಾಧಿಕಾರಿ ಭವ್ಯಶ್ರಿ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಎನ್.ಸಿ.ಡಿ ಘಟಕದ ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.



