Wednesday, March 11, 2026

spot_img

ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಡುಪಿ : ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಉಡುಪಿಯಲ್ಲಿ ಯೂತ್ ರೆಡ್ ಕ್ರಾಸ್, ಎನ್‌ಎಸ್‌ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಲಯನ್ಸ್ ಕ್ಲಬ್ ಹಿರಿಯಡ್ಕ ಮತ್ತು ಕೆಎಂಸಿ ರಕ್ತ ನಿಧಿ ಘಟಕದ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೆಎಂಸಿ ಮಣಿಪಾಲದ ರಕ್ತ ನಿಧಿ ಘಟಕದ ವೈದ್ಯಾಧಿಕಾರಿ ಡಾ. ವಿವೇಕ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.

ಅವರು ಮಾತನಾಡಿ, ರಕ್ತದಾನವು ಮಾನವೀಯತೆ ಮತ್ತು ಸಮಾಜ ಸೇವೆಯ ಮಹತ್ವದ ಕಾರ್ಯವಾಗಿದ್ದು, ಯುವಜನತೆ ಇಂತಹ ಸೇವಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಹಿರಿಯಡ್ಕದ ಅಧ್ಯಕ್ಷ ರಘುವೀರ್ ಶೆಟ್ಟಿಗಾರ್, ಪಿ.ಎಂ.ಜೆ.ಎಫ್ ಲಯನ್ಸ್ ಹರಿಪ್ರಸಾದ್ ರೈ ಹಾಗೂ ಎಂ.ಜೆ.ಎಫ್ ಯು. ವಾದಿರಾಜ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್ ವಹಿಸಿದ್ದರು. ಅವರು ಮಾತನಾಡಿ, ರಕ್ತದಾನ ಶಿಬಿರಗಳಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವನ್ನು ಬೆಳೆಸುತ್ತವೆ ಎಂದು ತಿಳಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಅನನ್ಯ ಪ್ರಾರ್ಥಿಸಿದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕ ಸ್ಟಾಲಿನ್ ಡಿಸೋಜಾ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಸನತ್ ಕೋಟ್ಯಾನ್ ವಂದಿಸಿದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕಿ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles