Monday, August 25, 2025

spot_img

ಮಹಾವೀರರ ಅಹಿಂಸ ಮಾರ್ಗ ಪಾಲನೆ ಬದುಕಿಗೆ ದಾರಿದೀಪ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ.

ಉಡುಪಿ : ಭಗವಾನ್ ಮಹಾವೀರರ ಮುಖ್ಯ ತತ್ವವಾದ ಅಹಿಂಸಾ ಮಾರ್ಗವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ್ ಮಿಲನ್ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ಭಗವಾನ್ ಮಹಾವೀರರ ಭಾವ ಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸಿ ಮಾತನಾಡಿದರು.
ಭಗವಾನ್ ಮಹಾವೀರರ ಆದರ್ಶಗಳು ಇಂದಿನ ಕಾಲಘಟ್ಟಕ್ಕೆ ಅತೀ ಅವಶ್ಯವಾಗಿದ್ದು. ಮನುಷ್ಯ ತಾನು ಹೊಂದಿರುವ ಬದುಕಿನ ಬಗೆಗೆ ತೃಪ್ತಿ ಹೊಂದಬೇಕು ಎಂಬುದನ್ನು ಜಗತ್ತಿಗೆ ಸಾರಿದ ಮಹಾವೀರರ ಚಿಂತನೆಗಳು ನಮ್ಮೆಲರಿಗೂ ದಾರಿದೀಪ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಪ್ರಸ್ತುತ ಸಮಯದಲ್ಲಿ ಮಹಾವೀರರ ಅಹಿಂಸ ತತ್ವಗಳು ಇನ್ನಷ್ಟು ಪ್ರಚಾರಗೊಳಿಸುವುದರಿಂದ ಜನರ ಶಾಂತಿಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರೊ.ವೃಷಭರಾಜ್ ಜೈನ್ ಉಪನ್ಯಾಸ ನೀಡಿ ಮಾತನಾಡಿ, ಸಾಮಾನ್ಯ ಜೀವನವನ್ನು ತೊರೆದು ಆಧ್ಯಾತ್ಮಿಕತೆಯನ್ನು ಆಳವಡಿಸಿಕೊಂಡ ಮಹಾವೀರರು ಅಹಿಂಸೆಯೇ ಪರಮ ಧರ್ಮ ಎಂಬುದನ್ನು ನಂಬಿದವರು. ಅವರ 5 ತತ್ವಗಳಾದ ಅಹಿಂಸೆ, ಸತ್ಯ, ಅಸ್ತೇಯ, ಅಪರಿಗ್ರಹ ಹಾಗೂ ಬ್ರಹ್ಮಚಾರ್ಯವನ್ನು ಅನುಸರಿಸುವುದರಿಂದ ಉತ್ತಮ ಜೀವನ ನಿರ್ಮಾಣ ಸಾಧ್ಯ ಎಂದು ತಮ್ಮ ತತ್ವಗಳಲ್ಲಿ ಸಾರಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಜೈನ್ ಮಿಲನ್ ನ ಅಧ್ಯಕ್ಷ ಡಾ.ನಿತಿನ್ ಪಾಟೇಲ್, ಕಾರ್ಯಾಧ್ಯಕ್ಷ ಪ್ರಸನ್ನ ಕುಮಾರ್, ಜೈನ್ ಮಿಲನ್ ನ ಪದಾಧಿಕಾರಿಗಳು, ಜಿಲ್ಲಾಡಳಿತದ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ಜೈನ್ ಮಿಲನ್ ನ ಕಾರ್ಯದರ್ಶಿ ಡಾ. ನಿತಿನ್ ಕುಮಾರ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles