Sunday, September 27, 2026

spot_img

ಮಹಿಳಾ ಕಾಂಗ್ರೆಸ್‌ನಿಂದ ಪಕ್ಷ ಸಂಘಟನೆಗೆ ಬಲ ತುಂಬುವ ಸಂಕಲ್ಪ:ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರಿಗೆ ಅಭಿನಂದನೆ

ಉಡುಪಿ : ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರ ನೇತೃತ್ವದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಅಭಿನಂದಿಸಿ ಗೌರವಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಜ್ಯೋತಿ ಹೆಬ್ಬಾರ್ ಅವರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ನಾಯಕತ್ವದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಳ್ಳಲಿ. ಎಲ್ಲ ಹಂತಗಳ ಚುನಾವಣೆಗಳಲ್ಲಿಯೂ ಪಕ್ಷದ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸುವಂತಾಗಲಿ ಎಂದು ಆಶಿಸಿದರು. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಂಪೂರ್ಣವಾಗಿ ಸಹಕರಿಸಲಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯದಂತೆ 16ರಿಂದ 35 ವರ್ಷ ವಯೋಮಾನದ ಯುವಕ-ಯುವತಿಯರನ್ನು ಒಗ್ಗೂಡಿಸುವ ‘ಭಾರತ್ ಜೋಡೋ ಯುವ ಸಂಘ’ ಸಂಘಟನೆಯನ್ನು ಜಿಲ್ಲಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು, ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ಕಾರ್ಯನಿರ್ವಹಿಸುವುದರ ಜತೆಗೆ ಎಲ್ಲರ ಸಹಕಾರದೊಂದಿಗೆ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಪಕ್ಷದ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯವಾಗಲಿದೆ ಎಂದರು. ಮಹಿಳಾ ಕಾಂಗ್ರೆಸ್‌ನೊಂದಿಗೆ ಸದಾ ಕೈಜೋಡಿಸಿ, ಅವರ ಧ್ವನಿಯಾಗಿ ನಿಲ್ಲುವುದಾಗಿ ಭರವಸೆ ನೀಡಿ, ಗೌರವಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಸಭೆಯಲ್ಲಿ ಹಿರಿಯ ಮಹಿಳಾ ಕಾಂಗ್ರೆಸ್ ನಾಯಕಿಯರಾದ ಸರಸು ಬಂಗೇರ, ಗೀತಾ ವಾಗ್ಳೆ, ಮೀನಾಕ್ಷಿ ಮಾಧವ ಬನ್ನಂಜೆ, ಅನಿತಾ ಡಿ’ಸೋಜಾ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಬಾನು ಭಾಸ್ಕರ್, ರೇಖಾ ಸುವರ್ಣ, ಅನಿತಾ ಬಾಬು ಪೂಜಾರಿ, ಮಮತಾ ಶೆಟ್ಟಿ, ಶಾಂತಲತಾ ಶೆಟ್ಟಿ, ಶಾಂತಾ ರೈ, ಸುಮಾ ಅಡ್ಯಂತಾಯ, ಸೂರ್ಯಕಾಂತಿ ಹಾಗೂ ಮಹಿಳಾ ನಾಯಕಿಯರಾದ ಚಂದ್ರಿಕಾ ಶೆಟ್ಟಿ, ಐರಿನ್ ಅಂದ್ರಾದೆ, ಐಡಾ ಗಿಬ್ಬ ಡಿ’ಸೋಜಾ, ಪ್ರಭಾ ಶೆಟ್ಟಿ, ರಮಾದೇವಿ, ನಾಗಮ್ಮ, ರೋಶ್ನಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಪುಷ್ಪ ಅಂಚನ್ ಸ್ವಾಗತಿಸಿದರು. ಸಂಧ್ಯಾ ತಿಲಕ್‌ರಾಜ್ ಗತಸಭೆಯ ವರದಿ ವಾಚಿಸಿದರು. ಗೋಪಿ ನಾಯ್ಕ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles