Monday, March 9, 2026

spot_img

ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ.ಎ. ಗಫೂರ್

ಉಡುಪಿ : ಮಹಿಳೆಯರು ತಮ್ಮ ಜೀವನದಲ್ಲಿ ತಾಯಿ, ಸಹೋದರಿ, ಹೆಂಡತಿ, ಮಗಳು ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿ ಕುಟುಂಬವನ್ನು ಮುನ್ನಡೆಸುತ್ತಾರೆ. ಕುಟುಂಬದೊಂದಿಗೆ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆಯೂ ಮಹಿಳೆಯರ ಮೇಲಿದೆ. ಮಹಿಳೆಯರು ಸ್ವಾವಲಂಬಿಗಳಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ ಎಫ್‌ ಗಫೂರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀಶಕ್ತಿ ಒಕ್ಕೂಟ, ಪರ್ಯಾಯ ಶ್ರೀ ಶಿರೂರು ಮಠ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಸಮಾಜದ ಅಮೂಲ್ಯ ಆಸ್ತಿ. ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಿದಾಗ ಇಡೀ ಕುಟುಂಬವೇ ಏಳಿಗೆ ಕಾಣುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ನಾಯಕರಾದಾಗ ಗೊಂದಲಕ್ಕೆ ಅವಕಾಶ ನೀಡದೆ ದಕ್ಷತೆಯಿಂದ ಆಡಳಿತ ನಡೆಸುತ್ತಾರೆ. ಅವರು ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಕಾರ್ಯ ನಿರ್ವಹಿಸುತ್ತಾರೆ ಎಂದರು.

.ಅಪರ ಜಿಲ್ಲಾಧಿಕಾರಿ ಅಬೀದ್‌ ಗದ್ಯಾಳ್ ಮಾತನಾಡಿದರು. ಈ ಸಂದರ್ಭದಲ್ಲಿ ಮಹಿಳೆಯರು ಉತ್ಪಾದಿಸಿದ ವಸ್ತುಗಳ ಮಳಿಗೆಗಳನ್ನು ಅನಾವರಣಗೊಳಿಸಲಾಯಿತು. ಉತ್ತಮ ಸೇವೆಗಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. “ಹೆಣ್ಣು ಮಗಳನ್ನು ಉಳಿಸಿ, ಹೆಣ್ಣು ಮಗಳನ್ನು ಓದಿಸಿ” ಎಂಬ ಸಹಿ ಸಂಗ್ರಹಣಾ ಅಭಿಯಾನವೂ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ರಕ್ಷಣಾಧಿಕಾರಿ ನಾಗರತ್ನ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಾ ಕಲ್ಕೂರ, ಹಿರಿಯರಾದ ಸರಳ ಕಾಂಚನ್, ಶ್ಯಾಮಲಾ ಸಿ.ಕೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಳಿಗಳ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನುರಾಧಾ ಹಾದಿಮನಿ ಸ್ವಾಗತಿಸಿದರು. ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ವಸಂತಿ ರಾವ್ ಕೊರಡ್ಕಲ್ ವಂದಿಸಿದರು. ಸಂಗೀತ ಕಾರ್ಯಕ್ರಮದ ನಿರೂಪಣೆ ನಡೆಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles